Just in
Home / News / India / ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆ

ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆ

Spread the love


ಮಡಿಕೇರಿ ಜೂ.27 : ಕೊಡಗು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕೊಡಗು ಜಿಲ್ಲೆಯಲ್ಲಿ ಇಂದು ಶನಿವಾರ ಹೊಸದಾಗಿ 4 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಬೆಂಗಳೂರು ಪ್ರಯಾಣದ ಇತಿಹಾಸವಿರುವ 33 ವರ್ಷದ ಸ್ತ್ರೀಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರನ್ನು ನೇರವಾಗಿ ಕೊಡಗು ವೈದ್ಯಕೀಯ ಸಂಸ್ಥೆ ಅಧೀನದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಶುಕ್ರವಾರ ಎರಡು ವರ್ಷ ವಯಸ್ಸಿನ ಮಗು ಸೇರಿದಂತೆ 6 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಒಟ್ಟು 40 ಆಗಿದ್ದು, ಇವರಲ್ಲಿ ಮೂವರು ಗುಣಮುಖರಾಗಿದ್ದಾರೆ. ಉಳಿದ 37 ಸೋಂಕಿತರನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಡ್ಲಿಪೇಟೆ ಹೋಬಳಿ ಶಿರಂಗಾಲ ಗ್ರಾಮದ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 14 ವರ್ಷದ ಹುಡುಗಿಗೆ ಸೋಂಕು ದೃಢಪಟ್ಟಿದೆ.

ಕುಶಾಲನಗರದ ಹುಲುಸೆ ಗ್ರಾಮದ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 08 ವರ್ಷದ ಹುಡುಗನಿಗೆ ಸೋಂಕು ದೃಢಪಟ್ಟಿದೆ


ವೀರಾಜಪೇಟೆ ತಾಲೂಕಿನ ಹುಂಡಿ ಮತ್ತು ಸೋಮವಾರ ತಾಲೂಕಿನ ನೆಲ್ಲಿಹುದಿಕೇರಿ ಗ್ರಾಮದಲ್ಲಿ ವಾಸ ಮಾಡಿದ್ದ, ಬೆಂಗಳೂರಿನ ಪ್ರಯಾಣದ ಇತಿಹಾಸವಿರುವ ಗಂಡ, ಹೆಂಡತಿ ಮತ್ತು ಎರಡು ವರ್ಷ ವಯಸ್ಸಿನ ಮಗುವಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದರೆ, ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ನಿವಾಸಿ, ಪುಣೆಯಿಂದ ಜಿಲ್ಲೆಗೆ ಹಿಂತಿರುಗಿರುವ 24 ವರ್ಷ ಪ್ರಾಯದ ವ್ಯಕ್ತಿಯಲ್ಲೂ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಪ್ರಪ್ರಥಮ ಕೊರೋನಾ ಪ್ರಕರಣ ವರದಿಯಾಗಿದ್ದ ವೀರಾಜಪೇಟೆ ತಾಲ್ಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು, ಶಾರ್ಜಾದಿಂದ ಮರಳಿರುವ 23 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ದೃಢಪಟ್ಟಿದೆ.
ಸೋಮವಾರಪೇಟೆ ತಾಲ್ಲೂಕು ಕುಶಾಲನಗರ ಹೋಬಳಿಯ ಹುಲುಸೆ ಗ್ರಾಮದ 46 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಬೆಂಗಳೂರಿನಿಂದ ಜಿಲ್ಲೆಗೆ ಬಂದವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸೋಂಕಿತ ವ್ಯಕ್ತಿಗಳನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಹೊಸದಾಗಿ ಹುಂಡಿ, ನೆಲ್ಲಿಹುದಿಕೇರಿ ಮತ್ತು ಹುಲುಸೆ ಗ್ರಾಮಗಳನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 19 ನಿಯಂತ್ರಿತ (ಕಂಟೈನ್‍ಮೆಂಟ್) ಪ್ರದೇಶಗಳಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ. ಫೋಟೋ :: ಹಾಸ್ಪಿಟಲ್, ಡಿಸಿ

Leave a Reply

Your email address will not be published.

x

Check Also

ರಾಯಚೂರು: ಬ್ಯಾಂಕ್ ಸಿಬ್ಬಂದಿಯ ಸಾವು, ಅನೈತಿಕ ಸಂಬಂಧ ಆರೋಪ ; ತನಿಖೆಗೆ ಒತ್ತಾಯ

Spread the love ರಾಯಚೂರು: ತಾಲ್ಲೂಕಿನ ತುಂಗಭಧ್ರಾ ಕ್ಯಾಂಪ್ ಗ್ರಾಮದ ಇಂದಿರಾ ಅವರು ನಗರದ ಆಶಾಪುರ ...

ಸೂರ್ಯೋದಯ ಫೈನಾನ್ಸ್ ಕಂಪನಿ ಹಾಗೂ ಎಲ್ಎನ್ ಟಿ ಕಂಪನಿಯಿಂದ ಪೀಡನೆ: ಸಾಲ ಮರುಪಾವತಿಗೆ ಕಾಲಾವಕಾಶ ನೀಡಿ

Spread the love ರಾಯಚೂರು: ಸೂರ್ಯೋದಯ ಸಣ್ಣ ಫೈನಾನ್ಸ್ ಮತ್ತು ಎಲ್ಎನ್ಟಿ ಫೈನಾನ್ಸ್ ನಿಂದ ಪಡೆದ ...

ಭಾಗಮಂಡಲದಲ್ಲಿ ಗುಡ್ಡ ಕುಸಿತ ನಾಲ್ವರು ಕಾಣೆ

Spread the love ದಿನಾಂಕ:06-08-2020 ಕೊಡಗು ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ...

error: Content is protected !!