Just in
Home / 2020 / June / 29

Daily Archives: June 29, 2020

59 ಚೀನಿ ಆ್ಯಪ್‌ಗಳನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ – ಟಿಕ್ ಟಾಕ್ ಬ್ಯಾನ್

ನವದೆಹಲಿ: ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಚೀನಾದೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಭಾರತ ಸರ್ಕಾರ ಸೋಮವಾರ ಅಭೂತಪೂರ್ವ ಹೆಜ್ಜೆ ಇಟ್ಟಿದ್ದು, ಹಲವಾರು ಚೀನೀ ಆ್ಯಪ್‌ಗಳನ್ನು ನಿಷೇಧಿಸಲು ನಿರ್ಧರಿಸಿದೆ. 40 ರಿಂದ 59 ಅಪ್ಲಿಕೇಶನ್‌ಗಳನ್ನು ನಿಷೇಧಿಸಬಹುದೆಂದು ಟೈಮ್ಸ್ ನೌ ವರದಿ ಮಾಡಿದ್ದು, ಶೀಘ್ರದಲ್ಲೇ ಸರ್ಕಾರದ ಅಧಿಸೂಚನೆಯನ್ನು ಹೊರಡಿಸುವ ಸಾಧ್ಯತೆಯಿದೆ. ಇದರಲ್ಲಿ ಟಿಕ್ ಟಾಕ್ ಒಳಗೊಂಡಿದೆಯೆಂದು ಖ್ಯಾತ ...

Read More »

ಪರಿಶಿಷ್ಟ ಜಾತಿ – ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ

ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಸೂಚನೆಮಡಿಕೇರಿ ಜೂ.29 : ಅನುಸೂಜಿತ ಜಾತಿ, ಅನುಸೂಚಿತ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಸೂಚನೆ ನೀಡಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅನುಸೂಜಿತ ಜಾತಿ, ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ...

Read More »

ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 46 ಕ್ಕೆ ಏರಿಕೆ

ಮಡಿಕೇರಿ ಜೂ.29 : ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ ಮೂರು ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.ಈ ಹಿಂದೆ ಕೋವಿಡ್-19 ಸೋಂಕು ದೃಢಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 32 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಜೊತೆಗೆ ಈ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿದ್ದ ...

Read More »

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕೊಡಗಿನಲ್ಲಿ ಜೂ.29 : ಪೆಟ್ರೋಲ್, ಡೀಸೆಲ್ ಮತ್ತು ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.ಸೈಕಲ್ ಗಳ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಕಾಂಗ್ರೆಸ್ ಪ್ರಮಖರು ಹಾಗೂ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ...

Read More »

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ಬಂಧಿಸಲು ಇರಾನ್ ನಿಂದ ಅರೆಸ್ಟ್ ವಾರೆಂಟ್

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇತರರನ್ನು ಬಂಧಿಸಲು ಇರಾನ್ ಅರೆಸ್ಟ್ ವಾರಂಟ್ ಹೊರಡಿಸಿದೆ. ಇದಕ್ಕಾಗಿ ಇರಾನ್ ಇಂಟರ್ಪೋಲ್ ಸಹಾಯವನ್ನು ಕೇಳಿದೆ. ಬಾಗ್ದಾದ್ ನಲ್ಲಿ ಇರಾನಿನ ಸೇನಾಧಿಕಾರಿಯ ಮೇಲೆ ಡ್ರೋನ್ ದಾಳಿಯನ್ನು ನಡೆಸಿದ ಕಾರಣಕ್ಕಾಗಿ ಈ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಸ್ಥಳೀಯ ಪ್ರಾಸಿಕ್ಯೂಟರ್ ಸೋಮವಾರ ಹೇಳಿದ್ದಾರೆ. ಟ್ರಂಪ್ ಬಂಧನದ ಅಪಾಯವನ್ನು ಎದುರಿಸದಿದ್ದರೂ, ವಿಶ್ವ ಶಕ್ತಿಗಳೊಂದಿಗಿನ ಟೆಹ್ರಾನ್‌ನ ...

Read More »

ನಗರಸಭೆ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ: ಜಿ.ಚಿದ್ವಿಲಾಸ್

ದುಬಾರಿ ತೆರಿಗೆ : ನಗರಸಭೆ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆಮಡಿಕೇರಿ ಜೂ.29 : ಮಡಿಕೇರಿ ನಗರಸಭೆ ಸಕಾರಣಗಳನ್ನು ನೀಡದೆ, ದುಪ್ಪಟ್ಟು ತೆರಿಗೆ ದರವನ್ನು ನಿಯಮ ಬಾಹಿರವಾಗಿ ಸಂಗ್ರಹಿಸುತ್ತಿರುವುದನ್ನು ಪ್ರಶ್ನಿಸಿ ರಾಜ್ಯ ಉಚ್ಚ ನ್ಯಾಯಾಲಯದ ಕದ ತಟ್ಟಲಾಗುವುದೆಂದು ಮಡಿಕೇರಿ ನಾಗರಿಕರು ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕರ ಪರವಾಗಿ ಮಾತನಾಡಿದ ಜಿ.ಚಿದ್ವಿಲಾಸ್ ಅವರು, ಕೊರೋನಾದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದ ನಡುವೆಯೂ ಮಡಿಕೇರಿ ...

Read More »

ಪ್ರತ್ಯೇಕತಾವಾದಿ ಸೈಯದ್ ಅಲಿ ಶಾ ಗೀಲಾನಿ ರಾಜೀನಾಮೆ

ಕಳೆದ ಆಗಸ್ಟ್‌ನಿಂದ ಗೃಹಬಂಧನದಲ್ಲಿದ್ದ ಜಮ್ಮು ಮತ್ತು ಕಾಶ್ಮೀರ ಮೂಲದ ಪ್ರತ್ಯೇಕತಾವಾದಿ ಸೈಯದ್ ಅಲಿ ಶಾ ಗೀಲಾನಿಯವರು ಸೋಮವಾರ ಹುರಿಯತ್ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರನ್ನು ಹುರಿಯತ್‌ನ ಜೀವಮಾನದ ಅವಧಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು. 90 ರ ಹರೆಯದ ಗೀಲಾನಿ ಅವರು ಕೆಲವು ಸಮಸ್ಯೆಗಳಿವೆ ಆದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರವೊಂದರಲ್ಲಿ ತಿಳಿಸಿದ್ದಾರೆ. “ಪ್ರಸಕ್ತ ...

Read More »

ಕೊಡಗು ಜಿಲ್ಲೆಯಲ್ಲಿ ಈ ದಿನ ಹೊಸದಾಗಿ 03 ಕೋವಿಡ್ ಸೋಂಕು ಪ್ರಕರಣ – ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ

ಕೊಡಗು ಜಿಲ್ಲೆಯಲ್ಲಿ ಈ ದಿನ ಹೊಸದಾಗಿ 03 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ. ವಿವರ ಕೆಳಕಂಡಂತಿದೆ. ಈ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 32 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.ಈ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿದ್ದ ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ ...

Read More »

ವಿದೇಶಿಯರಿಗೆ ಜನಿಸಿದ ವ್ಯಕ್ತಿಯು ದೇಶಭಕ್ತನಾಗಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿಯನ್ನು ಟೀಕಿಸಿದ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್

ವಿದೇಶಿಯರಿಗೆ ಜನಿಸಿದ ವ್ಯಕ್ತಿಯು ದೇಶಭಕ್ತನಾಗಲು ಸಾಧ್ಯವಿಲ್ಲ ಎಂದು ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ತಮ್ಮ ಇತ್ತೀಚಿನ ವಿವಾದಾತ್ಮಕ ಹೇಳಿಕೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಹೆಸರಿಸದೆ ಗುರಿಯಾಗಿಸಿಕೊಂಡಿದ್ದಾರೆ.ಭೋಪಾಲ್‌ನ ಬಿಜೆಪಿ ಸಂಸದೆ ರಾಹುಲ್ ಗಾಂಧಿ ಮತ್ತು ಅವರ ತಾಯಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ದೇಶಪ್ರೇಮವನ್ನು ಭಾನುವಾರ ಪ್ರಶ್ನಿಸಿದ್ದಾರೆ. “ಚಾಣಕ್ಯ ಅವರು ಮಣ್ಣಿನ ಮಗನಿಂದ ...

Read More »

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ರೈಡ್ ಮಾಡಿದ ಬೈಕ್ ಬಿಜೆಪಿ ನಾಯಕನ ಮಗನದೆಂದು ನೆಟ್ಟಿಗರು ಆಕ್ರೋಶ

ನಿನ್ನೆ ಭಾನುವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ದುಬಾರಿ ಬೆಲೆಯ ಬೈಕ್ ರೈಡ್ ಮಾಡಿದ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಲೇವಡಿ ಮಾಡಿದ್ದಾರೆ. ಕೆಲವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿಲ್ಲವೆಂದು ಲೇವಡಿ ಮಾಡಿದ್ದಾರೆ. ಸಾಕೇತ್ ಗೋಖಲೆಯವರು ಟ್ವೀಟ್ ಮಾಡಿ ಬೈಕ್ ...

Read More »